Index   ವಚನ - 253    Search  
 
ಜಗದ ವರ್ತಕದ ಇರವು ಎಂತೆಂದಡೆ: ಶೈವ ನೇಮಸ್ಥ ಎರಡೆ ಭೇದ. ದಿವಾರಾತ್ರಿ ಉಭಯ ಕೂಡಿ ದಿನ ಲೆಕ್ಕಕ್ಕೆ ಬಂದಂತೆ, ಶಕ್ತಿ ಸಾಕಾರವಾಗಿ, ನಿಶ್ಶಕ್ತಿ ವಸ್ತುರೂಪಾಗಿ, ಉಭಯವು ಕೂಡಿ ಘಟ ನಡೆವಂತೆ ನಡೆವುದು ಜಗ ಸಂಬಂಧ, ಉಭಯಕ್ಕೆ ಹೊರಗಾದುದು, ಸದಾಶಿವಮೂರ್ತಿಲಿಂಗದ ಭಾವಸಂಬಂಧ.