Index   ವಚನ - 46    Search  
 
ಜಾತಿ ಜಾತಿಯ ಕೂಡಿದಲ್ಲದೆ ನಿಹಿತ ಸುಖವಿಲ್ಲ. ಬಲ್ಲವ ಬಲ್ಲವನಲ್ಲಿಯಲ್ಲದೆ ಒಳ್ಳೆಯ ಗುಣವಿಲ್ಲ. ಭಟ ಮುಗ್ಗಿದಡೆ ತಿಳಿದ ಭಟ ಕೈ ಹಿಡಿದೆತ್ತಿ, ಇದಿರಾಗೆಂದಡೆ, ಊಣೆಯವೆಲ್ಲಿ ಅಡಗಿತ್ತು? ಕೇಳುವ ಬನ್ನಿ, ಅರ್ಕೇಶ್ವರಲಿಂಗವ.