Index   ವಚನ - 67    Search  
 
ಬಂಧುಗಳ ಬೆಂಬಳಿಯ ಕಳ್ಳನ ಹೆಂಡತಿಗೆ ಭಗ ಮೂರು, ಬಾಯಾರು, ಪೃಷ್ಠ ಎಂಬತ್ತನಾಲ್ಕುಲಕ್ಷ. ರೋಮ ಎಂಟುಕೋಟಿ. ಹಲ್ಲು ಹದಿನಾರು, ನಾಲಗೆ ಏಳು. ಕಿವಿ ಇಪ್ಪತ್ತೈದು, ನಾಡಿ ಶತದಶ. ಮೂಗು ಮೂವತ್ತೇಳು, ಕಾಲೆಂಟು. ಭುಜವೆರಡು, ಕೈವೊಂದೆ. ಹಿಂದೆ ಮುಂದೆ ನೋಡುವ ಕಣ್ಣು, ಅಭಿಸಂಧಿಯೊಳಗೆ ಒಂದೆ ಅದೆ. ಅರ್ಕೇಶ್ವರಲಿಂಗವ ಕಾಣಬಾರದು.