Index   ವಚನ - 3    Search  
 
ವೇದಂಗಳ ನಾಲ್ಕು ಭೇದಿಸಲರಿಯದೆ, ಹದಿನಾರು ಶಾಸ್ತ್ರ ನಿಮ್ಮ ಶಾಂತಿಯನರಿಯದೆ, ಇಪ್ಪತ್ತೆಂಟು ಪುರಾಣ ನಿಮ್ಮ ಪುಣ್ಯದ ಪುಂಗವನರಿಯದೆ, ತೊಳಲಿ ಬಳಲುವುದಕ್ಕೆ [ಚ]ರ್ಚೆಯ ಮಾಡಿದೆ. ನಾ ಕೆಟ್ಟೆ, ಹುಚ್ಚುಗೊಂಡ ನಾಯಿ ಒಡೆಯನ ಕಚ್ಚಿದಂತೆ, ಕೆಟ್ಟೆ. ಆಗಮಗಳಲ್ಲಿ ಹೋರಿ, ದೃಷ್ಟವ ಕಾಣದೆ ಹೊತ್ತುಹೋರಿದೆನಯ್ಯಾ. ತಿರುಗುವ ಮೃಗವ ಎಚ್ಚಂತೆ, ಎನಗದು ಕುರುಹಾಯಿತ್ತು, ಎನ್ನ ಗೂಡಿನ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗ.