Index   ವಚನ - 32    Search  
 
ಸುಜ್ಞಾನ ಅಜ್ಞಾನವೆಂಬ ಉಭಯದ ಭೇದ, ದೀಪದ ಕುಡಿವೆಳಗಿನ ಧೂಮದ ಪರಿಯಂತೆ. ಅರಿವು ಮರವೆ ಬೇರೆ ಎಡೆದೆರಪಿಲ್ಲದೆ ಪುದಿದು, ಆತ್ಮನಲ್ಲಿ ಎಡೆಬಿಡುವಿಲ್ಲದಿಪ್ಪುದು, ಹೆರೆಹಿಂಗುವ ಪರಿಯಿನ್ನೆಂತೊ? ಪಂಕ ಸಲಿಲದಂತೆ, ಪಾಷಾಣ ಪಾವಕನಂತೆ, ತೈಲ ರಜ್ಜುವಿನ ಯೋಗದಂತೆ ಹೆರೆಹಿಂಗಿದಡೆ ಅರಿಯಬಾರದು. ಕೂಡಿದ್ದಡೆ ಅರಿವಿಂಗೆ ವಿರೋಧ. ಗೋವು ಮಾಣಿಕವ ನುಂಗಿದಂತೆ. ಇದಾರಿಗೂ ಅಸಾಧ್ಯ, ಗುಡಿಯ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗ ಅವನರಿದವಂಗಲ್ಲದಿಲ್ಲ.