Index   ವಚನ - 43    Search  
 
ಕುಲ ಜಾತಿ ವರ್ಗದ ಶಿಶುಗಳಿಗೆ ಹಲವು ಭೇದದ ಹಾಲು. ನಲವಿಂದ ತಮ್ಮ ತಮ್ಮ ಮೊಲೆಗಳ ಉಂಡಲ್ಲದೆ ಬೆಳವಣಿಗೆಯಿಲ್ಲ. ಹಾಲು ದೇಹ ಹಲವಾದಡೆ, ಅಳಿವು ಉಳಿವು ಎರಡೇ ಭೇದ. ಏನನರಿತಡೂ ಜೀವನ ನೋವನರಿಯಬೇಕು. ನುಡಿ ನಡೆ ಎರಡಿಲ್ಲದೆ ದೃಢವಾಗಿ ಇರಬೇಕು. ಬಿರುದು ಹಿರಿಯರೆಂದಡೆ ಬಿಡಬೇಕಲ್ಲದೆ, ಕಡಿಯಬಹುದೆ ಅಯ್ಯಾ? ಮಾತಿನಲ್ಲಿ ಬಲ್ಲವರಾದಡೆ, ನೀತಿಯಲ್ಲಿ ಮರೆದಡೆ ಕೊಡನೊಡೆದ ಏತದ ಕಣೆಯಂತೆ, ಶರೀರದ ಗೂಡಿನ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗ.