Index   ವಚನ - 81    Search  
 
ಬ್ರಹ್ಮಂಗೆ ಇಚ್ಫಾಶಕ್ತಿಯಾಗಿದ್ದಲ್ಲಿ, ವಿಷ್ಣುವಿಂಗೆ ಕ್ರಿಯಾಶಕ್ತಿಯಾಗಿದ್ದಲ್ಲಿ, ರುದ್ರಂಗೆ ಜ್ಞಾನಶಕ್ತಿಯಾಗಿದ್ದಲ್ಲಿ, ಇಂತಿವರು ದಂಪತಿ ಸಹಜವಾಗಿ ಯುಗಜುಗಂಗಳ ಜೋಗೈಸುತ್ತಿದ್ದರು. ಬ್ರಹ್ಮಂಗೆ ಸರಸ್ವತಿಯೆಂದಾರು! ವಿಷ್ಣುವಿಗೆ ಲಕ್ಷ್ಮೀದೇವಿಯೆಂದಾರು! ರುದ್ರಂಗೆ ಉಮಾದೇವಿಯೆಂದಾರು! ಬ್ರಹ್ಮ ಅಂಗವಾಗಿ, ವಿಷ್ಣು ಪ್ರಾಣವಾಗಿ, ರುದ್ರ ಉಭಯಜ್ಞಾನವಾಗಿ, ಅಂದು ತಾಳಿದ ಸಾಕಾರದ ಗುಡಿಯ ಐಕ್ಯನಾದ ಕಾರಣ, ಗುಮ್ಮಟನೆಂಬ ನಾಮವ ತಾಳಿ, ಅಗಮ್ಯೇಶ್ವರಲಿಂಗ ಗುಹೇಶ್ವರನಾದ.