Index   ವಚನ - 13    Search  
 
ತನು ಕರಣೇಂದ್ರಿಯ ವಿಷಯಾದಿ ವಿಕಾರಂಗಳ ಹಿಂಗಿ, ತನ್ನ ನಿಜಸ್ವರೂಪವನರಿದು, ಅಂಗಲಿಂಗಸಂಬಂಧಿಯಾಗಿ, ಲೋಕದ ಜನರ ಸಂಗವ ತೊಲಗಿ, ಕರ್ಮದ ಹೊರೆಯಂ ಬಿಸುಟು, ಸೀಮೆಯಂ ಬಿಟ್ಟು, ಉಪಾಧಿಯಿಲ್ಲದೆ ಜೀವ ಭಾವವ ಬಿಟ್ಟು, ಮಲತ್ರಯವ ಹೊದ್ದದೆ, ನಿತ್ಯವಾದ ವಸ್ತುವೆ ತಾನಾಗಿ ನಿಂದ ಮಹಾಜ್ಞಾನ ಜಂಗಮವ ನೋಡಿರಯ್ಯ. ಅದೆಂತೆಂದಡೆ: ನಿಸ್ಸಂಗತ್ವಂ ನಿರಾಭಾರಂ ನಿಸ್ಸೀಮಂ ನಿರುಪಾಧಿಕಂ ನಿರ್ದೇಹಂ ನಿರ್ಮಲಂ ನಿತ್ಯಂ ತಸ್ಯ ಜಂಗಮ ಲಕ್ಷಣಂ|| ಇಂತೆಂದುದಾಗಿ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚನ್ನಮಲ್ಲಿಕಾರ್ಜುನದೇವಯ್ಯಾ, ನಿಮ್ಮ ಘನಕ್ಕೆ ಘನವಾದ ಪ್ರಭುದೇವರ ಘನವ ನೀವೆ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.