Index   ವಚನ - 1002    Search  
 
ಒಂದ ಮಾಡಹೋದಡೆ ಮತ್ತೊಂದಾಯಿತ್ತೆಂಬುದು, ಎನಗಾಯಿತ್ತು ನೋಡಾ ಬಸವಣ್ಣಾ. ಮಡಿವಾಳನ ಪೂರ್ವಾಪರವನೊರೆದು ನೋಡಿದಡೆ ನಿನ್ನ ಪೂರ್ವಾಪರ ಎನಗೆ ಅರಿಯ ಬಂದಿತ್ತು ನೋಡಾ ಬಸವಣ್ಣಾ. ನಿನ್ನ ಪೂರ್ವಾಪರಸಂಗವ ಮಾಡಬಂದಡೆ ಎನ್ನ ಪೂರ್ವಾಪರ ಎನಗೆ ಅರಿಯ ಬಂದಿತ್ತು ನೋಡಾ ಬಸವಣ್ಣಾ. ಮಹಾಜ್ಞಾನಿಗಳ ಸಂಗದಿಂದ ಉಭಯ ಸಂಗಸಿದ್ಧಿಯೆಂಬುದು ದಿಟವಾಯಿತ್ತು ನೋಡಾ ಬಸವಣ್ಣಾ. ಗುಹೇಶ್ವರನ ಶರಣ ಮಡಿವಾಳ ಮಾಚಿತಂದೆಗಳ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು ಕಾಣಾ ಸಂಗನಬಸವಣ್ಣಾ.