ವಚನ - 1006     
 
ಒಂದು ಪಟ್ಟಣದೊಳಗೆ ಛಪ್ಪನ್ನ ಗೃಹಕ್ಕೆ ಒಂದೆ ಕೀಲಾಗಿ, ಆ ಕೀಲಿನ ಸಕೀಲವನಾರಿಗೂ ಕಾಣಬಾರದೆಂದು ಭಾವಿಸಿ ಕಂಡರು ಒಂದೆ ಮನದವರು. ಉಳಿದವರೆಲ್ಲ ಆ ಕೀಲಿನೊಳಗಾಗಿ ಜೀವ ಜೀರ್ಣವಾಯಿತ್ತು. ಹದಿನೆಂಟು ಸ್ಥಾನದ ಕೀಲಗಳ ಸಂಗವನಳಿದು, ಸುಸಂಗವಾಗಿ ಶೃಂಗಾರ ಭೃಂಗಾರವಾಗದೆ ಒಂದು ಮುಖದಲ್ಲಿ ನಿಂದು ಗುಹೇಶ್ವರಾ-ನಿಮ್ಮ ಶರಣ ಚೆನ್ನಬಸವಣ್ಣ ಹೊರಗಾದ!