ವಚನ - 1010     
 
ಒಂದೆರಡರ ಮೂರು ನಾಲ್ಕರ ಪರಿವಿಡಿಯ ಭಾವವನರಿಯದೆ ಕೆಟ್ಟಿತ್ತು ನೋಡಾ ಲೋಕ, ಕೆಟ್ಟಿತ್ತು ನೋಡಾ ಜಗವು, ಕೆಟ್ಟಿತ್ತು ನೋಡಾ ಈರೇಳು ಭುವನವೆಲ್ಲವು, ಇತ್ತ ವಿಸ್ತಾರವಾಯಿತ್ತು, ಸ್ಥಿತಿ ಆಯತವಾಯಿತ್ತು. ಮಾರಾರಿ ಕಟ್ಟಳೆ ವಿಪರೀತವು ನೋಡಾ. ನಾದ ಚಕ್ರಂಗಳ, ಬಿಂದು ಚಕ್ರಂಗಳ, ಕಲಾ ಚಕ್ರಂಗಳ ನಿಲ್ಲೆಂದು ನಿಲಿಸಿದ ನಿರ್ವಯ ಚೆನ್ನಬಸವಣ್ಣನು ಕಾಲಕರ್ಮ ಸ್ಥಿತಿಗುಣವನತಿಗಳೆದು ನಿರ್ಭಾವದಲ್ಲಿ ನಿರ್ವಯ ಚೆನ್ನಬಸವಣ್ಣನು. ತನ್ನಲ್ಲಿ ತಾನು ಬೆಳಗಾದ ಚೆನ್ನಬಸವಣ್ಣನು, ಬೆಳಗಪ್ಪ ಬೆಳಗು ಲೀಯವಾಯಿತು ಗುಹೇಶ್ವರಾ ಚೆನ್ನಬಸವಣ್ಣನು.