ವಚನ - 1015     
 
ಒಡಲಡಗ ಮಚ್ಚಿದಾತನ ಅಚ್ಚಶರಣನೆಂಬೆ. ಮಡಿಲಡಗ ಮಚ್ಚಿದಾತನ ಅಚ್ಚಲಿಂಗವಂತನೆಂಬೆ. ಈ ಒಡಲಡಗ ಮಡಿಲಡಗ ಒಂದ ಮಚ್ಚದಿದ್ದರೆ ಉತ್ಪತ್ತಿ ಪ್ರಳಯ ತಪ್ಪದು. ಶ್ರೀಗುರು ಮಹಾಲಿಂಗದಲ್ಲಿ ಒಡಲಡಗ ಮಚ್ಚಿ ಅಚ್ಚಭವಿಯಾದ ಶರಣನೊಬ್ಬನೆ, ಗುಹೇಶ್ವರ.