ವಚನ - 1031     
 
ಕಂಡೆನಲ್ಲಾ ಕರುಳಿಲ್ಲದ ಕಲಿಯ! ಕಂಡೆನಲ್ಲಾ ಯೌವನವಿಲ್ಲದ ನೇಹವ! ಕಂಡೆನಲ್ಲಾ ಕೈದುವಿಲ್ಲದ ಕಲಿತನವ! ಕಂಡೆನಲ್ಲಾ ಕುಸುಮವಿಲ್ಲದ ಗಂಧವ! ಕಂಡೆನಲ್ಲಾ ಗುಹೇಶ್ವರಲಿಂಗದಲ್ಲಿ ಮರುಳಶಂಕರದೇವರೆಂಬ ನಾಮವ!