ವಚನ - 1043     
 
ಕಣ್ಗೆ ಕಾಬಡೆ ರೂಪಲ್ಲ, ಕೈಗೆ ಸಿಲುಕವಡೆ ದೇಹಿಯಲ್ಲ. ನಡೆವಡೆ ಗಮನಿಯಲ್ಲ, ನುಡಿವಡೆ ವಾಚಾಳನಲ್ಲ. ನಿಂದಿಸಿದಡೆ ಹಗೆಯಲ್ಲ, ಹೊಗಳಿದವರಿಗೆ ಕೆಳೆಯಲ್ಲ. ಗುಹೇಶ್ವರನ ನಿಲುವು ಮಾತಿನ ಮಾಲೆಗೆ ಸಿಲುಕುವುದೆ? ಸಿದ್ಧರಾಮಯ್ಯ. ನೀನು ಮರುಳಾದೆಯಲ್ಲಾ.