Index   ವಚನ - 1052    Search  
 
ಕರಿಯು ಸ್ಪರ್ಶನೇಂದ್ರಿಯದಿಂದ ಬಂಧನವಡೆದಳಿಯಿತ್ತು. ಪತಂಗನು ರೂಪೇಂದ್ರಿಯದಿಂದ ಬಂಧನವಡೆದಳಿಯಿತ್ತು. ಭೃಂಗನು ಗಂಧೇಂದ್ರಿಯದಿಂದ ಬಂಧನವಡೆದಳಿಯಿತ್ತು. ಕುರಂಗನು ಶಬ್ದೇಂದ್ರಿಯದಿಂದ ಬಂಧನವಡೆದಳಿಯಿತ್ತು. ಮತ್ಸ್ಯವು ರಸನೇಂದ್ರಿಯದಿಂದ ಬಂಧನವಡೆದಳಿಯಿತ್ತು.- ಇಂತೀ, ಒಂದೊಂದು ಇಂದ್ರಿಯೋದ್ರೇಕದಿಂದ ಒಂದೊಂದು ಪ್ರಾಣಿಯು ಪ್ರಳಯವಾಯಿತ್ತು. ಪಂಚೇಂದ್ರಿಯಂಗಳ, ಒಂದು ಘಟದಲ್ಲಿ ತಾಳಿಹ ಮನುಷ್ಯ ಪ್ರಾಣಿಗಳಿಗೆ, ಮರವೆ ಎಡೆಗೊಂಡು ದೇಹಮೋಹಭ್ರಾಂತು ಮುಸುಕಿ ಮಾಯೆಯ ಬಾಯ ತುತ್ತಹುದು ಚೋದ್ಯವೇನು ಹೇಳಾ ಗುಹೇಶ್ವರಾ?