ವಚನ - 1070     
 
ಕಾಮ ಸತ್ಯವ ತಿಂದಿತ್ತು, ಕ್ರೋಧ ಜ್ಞಾನವ ತಿಂದಿತ್ತು, ಲೋಭ ಧರ್ಮವ ತಿಂದಿತ್ತು, ಮೋಹ ವಿರಕ್ತಿಯ ತಿಂದಿತ್ತು, ಮದ ಭಕ್ತಿಯ ತಿಂದಿತ್ತು, ಮತ್ಸರ ಮುಕ್ತಿಯ ತಿಂದಿತ್ತು. ಈ ಕಾಮ ಕ್ರೋಧ ಲೋಭ ಮೋಹ ಮದ ಮಾತ್ಸರ್ಯವೆಂಬ ಅರಿಷಡ್ವರ್ಗಂಗಳಿವು ನಿಮ್ಮ ನೈದಲರಿಯದೆ, ಈ ಸತ್ಯ ಜ್ಞಾನ ಧರ್ಮ ವಿರಕ್ತಿ ಭಕ್ತಿ ಮುಕ್ತಿಗಳೆಂಬ ಸದ್ವರ್ತನೆಯ, ದುರ್ವರ್ತನೆಯೆಂಬರಿಷಡುವರ್ಗಂಗಳೆಂಬ ನಾಡ ನಾಯಿಗಳೆ ತಿಂದವು. ಎನಗೆ ಸದ್ವರ್ತನೆಯಿಲ್ಲದೆ ಅಪ್ರದೇಶಿಕನಾದೆನು ಕಾಣಾ ಗುಹೇಶ್ವರಾ.