ವಚನ - 1071     
 
ಕಾಮಿಸಿ ದೃಷ್ಟಿ ನಟ್ಟು ನಿಬ್ಬೆರಗಾದವರ ಕಂಡೆನಯ್ಯಾ. ಕಲ್ಪಿಸಿ ದೃಷ್ಟಿ ನಟ್ಟು ನಿಬ್ಬೆರಗಾದವರ ಕಂಡೆನಯ್ಯಾ. ಭಾವಿಸಿ ದೃಷ್ಟಿ ನಟ್ಟು ನಿಬ್ಬೆರಗಾದವರ ಕಂಡೆನಯ್ಯಾ. ರೂಪಿಸಿ ದೃಷ್ಟಿ ನಟ್ಟು ನಿಬ್ಬೆರಗಾದವರ ಕಂಡೆನಯ್ಯಾ. ಪೂರ್ವಾಚಾರ್ಯ ಸಂಗನಬಸವಣ್ಣನ ಕಂಡು. ಗುಹೇಶ್ವರಲಿಂಗವು ಅಲ್ಲಿಯೆ ಅನುಶ್ರುತವಯ್ಯಾ!