ವಚನ - 1074     
 
ಕಾಯಕ್ಕೆ ಜೀವಕ್ಕೆ ಸಂದು ಮುನ್ನುಳ್ಳಡೆ, ಅದು ಪ್ರಾಣಲಿಂಗವಲ್ಲ ಕಾಣಿರೆ. ಲೋಕಾಚಾರದ ಕೂಳನುಂಡು, ಲೀಲೆಯೊಳಾಡುತಿಹರಲ್ಲದೆ ಸಲೆ ಸಂದವರಪ್ಪರೆ? ಈ ಕಲ್ಲ ಹಿಡಿದಾತ ಆ ಕಲ್ಲನೆತ್ತ ಬಲ್ಲ? ಇವರೊಬ್ಬರ ಕರೆದಡೆ ಇಬ್ಬರು `ಓ' ಎಂಬಂತೆ. ಇವರಿಬ್ಬರ ಭಾವ ಹುರುಳಿಲ್ಲ ಕಾಣಾ ಗುಹೇಶ್ವರಾ.