Index   ವಚನ - 1087    Search  
 
ಕಾಯದಲ್ಲಿ ಕಾಯ ಸವೆದು, ಪ್ರಾಣದಲ್ಲಿ ಪ್ರಾಣ ಸವೆದು, ನಿಶ್ಚಿಂತವಾದ ಬಳಿಕ ಹಸಿವು-ತೃಷೆಗಳೆಂಬವು ಅಳಿದು ಹೋದವು ನೋಡಾ. ಉಂಡಿಹೆನೆಂಬ ಬಯಕೆಯಿಲ್ಲ ಒಲ್ಲೆನೆಂಬ ವೈರಾಗ್ಯವಿಲ್ಲ. ಇದು ಸ್ವಾನುಭಾವತೃಪ್ತಿಯೊಳಡಗಿತ್ತು. ಇದು ಕಾರಣ-ನಮ್ಮ ಗುಹೇಶ್ವರಲಿಂಗಕ್ಕೆ ಆರೋಗಣೆ ಇಲ್ಲ ಕಾಣಾ, ಸಂಗನಬಸವಣ್ಣಾ.