ವಚನ - 1088     
 
ಕಾಯದೊಳಗೆ ಕರಣವಿಲ್ಲ, ಪ್ರಾಣದೊಳಗೆ ಭಾವವಿಲ್ಲ. ಭಾವದೊಳಗೆ ಭ್ರಮೆಯಿಲ್ಲ, ನವನಾಳದೊಳಗೆ ಸುಳುಹು ಮುನ್ನಿಲ್ಲ. ಬ್ರಹ್ಮರಂಧ್ರದಲ್ಲಿ ಅರಿವು ಅರತ ಶಿವಯೋಗಿ; ಗುಹೇಶ್ವರನ ಶರಣ ಸಿದ್ಧರಾಮಯ್ಯಾ ನಿನ್ನ ಕಂಡು ಎನ್ನ ಭವಂ ನಾಸ್ತಿಯಾಯಿತ್ತು ಕೇಳಾ.