ವಚನ - 1105     
 
ಕಾಯ ಸತಿಯೆಂದು ಹೇಸಿ ಕಳೆದೆ. ವಾಯದ ಮನ ಮಾಯೆಯೆಂದು ಹೇಸಿ ಬಿಟ್ಟೆ. ವಾಯದ ಸತಿ ಎಂಬ ಸಂದೇಹವೆಮಗೇಕೆ? ಸತಿಯರ ಗೋಷ್ಠಿ ವಿಷ ಕಾಣವ್ವ. ಗುಹೇಶ್ವರಲಿಂಗದಲ್ಲಿ ನಿನ್ನ ಪತಿಯ ಕುರುಹ ಹೇಳಾ ಎಲೆ ಅವ್ವಾ?