ವಚನ - 1106     
 
ಕಾಮಿಸದೆ ನೆನೆದಡೆ, ಕಲ್ಪಿತವಿಲ್ಲದ ಪುರುಷ ಬಂದನೆನಗೆ ನೋಡಾ, ಕಲ್ಪಿತವಿಲ್ಲದೆ ನೆರೆದಡೆ, ಭಾವಿಸಲಿಲ್ಲದ ಸುಖವು ದೊರಕಿತ್ತು ನೋಡಾ, ಗುಹೇಶ್ವರನೆಂಬ ಲಿಂಗವನರಿದ ಬಳಿಕ ನೀ ನಾನೆಂಬುದಿಲ್ಲ ನೋಡಾ.