Index   ವಚನ - 1114    Search  
 
ಕಿರಿಯರಾದಡೇನು? ಹಿರಿಯರಾದಡೇನು? ಅರಿವಿಂಗೆ ಹಿರಿದು ಕಿರಿದುಂಟೆ? ಆದಿ ಅನಾದಿ ಇಲ್ಲದಂದು, ಅಜಾಂಡ ಬ್ರಹ್ಮಾಂಡ ಕೋಟಿಗಳುದಯವಾಗದಂದು ಗುಹೇಶ್ವರಲಿಂಗದಲ್ಲಿ ನೀನೊಬ್ಬನೆ ಮಹಾಜ್ಞಾನಿ ಎಂಬುದು ಕಾಣಬಂದಿತ್ತು ಕಾಣಾ, ಚೆನ್ನಬಸವಣ್ಣಾ.