Index   ವಚನ - 1129    Search  
 
ಕೆಳಗೇಳು ಭುವನಂಗಳಿಲ್ಲದಂದು, ಮೇಲೇಳು ಭುವನಂಗಳಿಲ್ಲದಂದು, ಅಂದು ಆದ ಗುರು, ಅಂದು ಆದ ಲಿಂಗ, ಅಂದು ಆದ ಜಂಗಮ, ಅಂದು ಆದ ಪ್ರಸಾದ, ಅಂದು ಆದ ಪಾದೋದಕ. ಇಂದಿನದಾವುದೂ ಹೊಸತಿಲ್ಲಯ್ಯಾ. ಶಶಿಧರಂಗೆ ವೃಷಭನಾಗಿದ್ದಂದು ಗುಹೇಶ್ವರನ ಶರಣ ಸಂಗನಬಸವಣ್ಣನಂದೆ ಸಾಹಿತ್ಯನು.