ವಚನ - 113     
 
ಆಗಮಪುರುಷರಿರಾ, ನಿಮ್ಮ ಆಗಮ ವಾಯುವಾಗಿ ಹೋಯಿತ್ತಲ್ಲಾ. ವಿದ್ಯಾ ಪುರುಷರಿರಾ, ನಿಮ್ಮ ವಿದ್ಯೆ ಅವಿದ್ಯೆಯಾಗಿ ಹೋದಲ್ಲಿ, ಬರುಮುಖರಾಗಿ ಇದ್ದಿರಲ್ಲಾ. ವೇದಪುರುಷರಿರಾ, ನಿಮ್ಮ ವೇದ ಹೊಲಬುದಪ್ಪಿ ಹೋದಲ್ಲಿ, ವೇದವೇ ದೈವವೆಂದು ಕೆಟ್ಟಿರಲ್ಲಾ. ಪುರಾಣಪುರುಷರಿರಾ, ನಿಮ್ಮ ಪುರಾಣ ವಿಚಾರಭ್ರಷ್ಟವಾಗಿ ಹೋದಲ್ಲಿ, ನೀವು ಒಡನೆ ಭ್ರಷ್ಟರಾಗಿ ಹೋದಿರಲ್ಲಾ. ಶಾಸ್ತ್ರಪುರುಷರಿರಾ, ನಿಮ್ಮ ಶಾಸ್ತ್ರದ ಮಹಾಪಥ ಹೊನಲಲ್ಲಿ ಹೋದಲ್ಲಿ ಭಕ್ತದೇಹಿಕದೇವನೆಂದರಿಯದೆ ಕೆಟ್ಟಿರಲ್ಲಾ. `ಯತ್ರ ಶಿವಸ್ತತ್ರ ಮಾಹೇಶ್ವರ'ನೆಂದು ಹೇಳಿತ್ತು ಮುನ್ನ, ಅಂತು ಭಕ್ತ, ನಿತ್ಯ ಸತ್ಯ ಸನ್ನಿಹಿತ ಗುಹೇಶ್ವರಾ-ನಿಮ್ಮ ಶರಣ.