Index   ವಚನ - 1133    Search  
 
ಕೈಲಾಸಕ್ಕೆ ಹೋದವರೆಲ್ಲ ಕೈಸೆರೆಯಾದರು. ಲಿಂಗದಲ್ಲಿ ಲೀಯವಾದವರೆಲ್ಲ ಬಂಧನಕ್ಕೊಳಗಾದರು. ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯದವರೆಲ್ಲ ಎಡೆಯಾಡುತ್ತಿದ್ದರು. ಗುಹೇಶ್ವರಾ ನಿಮ್ಮ ಶರಣ ಸಂಗನಬಸವಣ್ಣ ಜಂಗಮಪ್ರಸಾದಿಯಾದನಾಗಿ ಸ್ವಯಲಿಂಗವಾದ!