ವಚನ - 1135     
 
ಕೊಂಡ ಆಹಾರದ ರಸವ ಕಟ್ಟಿ, ಯೋಗಿಗಳಾದೆವೆಂಬ ಭಂಡರು ನೀವು ಕೇಳಿರೊ. ಜೋಡು ದೇಹದ ಮಲಿನವ ಕಟ್ಟಿ ಮಾಯೆಯ ಗೆದ್ದಿಹೆವೆಂಬರು. ಬಿಂದುವಿನ ಸಂಚವನಿವರೆತ್ತ ಬಲ್ಲರು? ಮನದ ಮಲಿನವೆ ಮಾಯೆ, ಮನದ ಸಂಚವೆ ಬಿಂದು. ಇಂತಪ್ಪ ಬಿಂದುವ ಕಟ್ಟಿ ಮಾಯೆಯ ಗೆಲಲರಿಯದವರು ಅವರೆತ್ತಣ ಯೋಗಿಗಳು ಗುಹೇಶ್ವರಾ?