Index   ವಚನ - 114    Search  
 
ಕಲ್ಲ ಹೋರಿನೊಳಗೊಂದು ಕಿಚ್ಚು ಹುಟ್ಟಿತ್ತ ಕಂಡೆ. ಹುಲ್ಲ ಮೇವ ಎರಳೆಯ, ಹುಲಿಯ, ಸರಸವನಾಡಿತ್ತ ಕಂಡೆ. ಎಲ್ಲರೂ ಸತ್ತು ಆಡುತ್ತಿಪ್ಪುದ ಕಂಡೆ. ಇನ್ನು ಎಲ್ಲಿಯ ಭಕುತಿ ಹೇಳಾ ಗುಹೇಶ್ವರಾ?