ವಚನ - 1145     
 
ಗಂಗೆಯ ತಡಿಯಲೊಂದು ಐವಾಗಿಲ ಪಟ್ಟಣದ ಕಾಲುವಳ್ಳಿಯಲ್ಲಿ ಹುಟ್ಟಿ ಬೆಳೆದೆ ನಾನು. ತರುವಕ್ಕಳ ಕೂಡಿ ನೀರಾಟವ ಹೊಕ್ಕು, ಉಟ್ಟುದ ಹೋಗಾಡಿಹಳೆಂದು ಬಾಯ ಬಾಯ ಕುಟ್ಟಿ, ಬ್ರಹ್ಮ ಪಾಶವೆಂಬ ಕಿರಿಗೆಯನುಗಿದುಕೊಂಡಳು ನಮ್ಮವ್ವೆ. ಇಂತಪ್ಪ ತಾಯಿತಂದೆಯರ ಕೂಡೆ ಮುನಿದು ಹೋಗಿ, ಗುಹೇಶ್ವರನಲ್ಲಯ್ಯನ ಮೊರೆಹೊಕ್ಕೆ. ಇನ್ನು ಮರಳಿ ಬಂದು ಆ ಕಿರಿಗೆಯನುಟ್ಟೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ.