ವಚನ - 1150     
 
ಗತಿವಿರಹಿತನೇನೆಂಬೆ, ಎಂತೆಂಬೆ? ಅಘಟಿತಘಟಿತ ಅಖಂಡಿತಮಹಿಮನನೇನೆಂಬೆನೇನೆಂಬೆ? ಆದಿಯಿಂದತ್ತತ್ತ ಗುಹೇಶ್ವರ! ಅಲ್ಲಯ್ಯನ ಸುಳುಹು ಜಗಕ್ಕೆ ಪಾವನ.