ವಚನ - 1152     
 
ಗಿರಿಗಳ ಗುಹೆಗಳ ಕಂದರದಲ್ಲಿ, ನೆಲಹೊಲನ ಮುಟ್ಟದೆ ಇಪ್ಪೆ ದೇವಾ! ಮನಕ್ಕೆ ಅಗಮ್ಯ ಅಗೋಚರನಾಗಿ, ಅಲ್ಲಲ್ಲಿ ಎಲ್ಲೆಲ್ಲಿಯೂ ನೀನೆ ಇಪ್ಪೆಯಯ್ಯಾ! ಗುಹೇಶ್ವರಾ ನಿಮ್ಮನು ಅಗಲಕ್ಕೆ ಹರಿವರಿದು ಕಂಡೆ ನಾನು.