ವಚನ - 1158     
 
ಗುರುವಿದು ಲಿಂಗವಿದು ಜಂಗಮವಿದು ಎಂಬ ಭೇದವ ಏಕವ ಮಾಡಿ ನಿನಗೆ ತೋರಿದವರಾರು ಹೇಳಾ? ಆದಿ ಅನಾದಿಯನು ಒಂದು ಮಾಡುವ, ಭಾವ ನಿರ್ಭಾವವನು ಅರುಹಿದವರಾರು ಹೇಳಾ? ದೀಕ್ಷೆ ಶಿಕ್ಷೆ ಸ್ವಾನುಭಾವದ ಪರಿಯ ತೋರಿ ನಿಜಪದದಲ್ಲಿ ನಿಲಿಸಿದವರಾರು ಹೇಳಾ? ಗುಹೇಶ್ವರಲಿಂಗದಲ್ಲಿ ನಿನ್ನ ಆಯತವ ಹೇಳಾ ಮಡಿವಾಳ ಮಾಚಯ್ಯಾ?