ವಚನ - 1160     
 
ಗುರುವಿನ ಪ್ರಾಣ ಲಿಂಗದಲ್ಲಿ ಲೀಯವಾದ ಬಳಿಕ ಆ ಲಿಂಗವೆನ್ನ ಕರಸ್ಥಲಕ್ಕೆ ಬಂದಿತ್ತು ನೋಡಾ. ಇದ್ದಾನೆ ನೋಡಾ, ಎನ್ನ ಗುರು ಅನಿಮಿಷನು ಎನ್ನ ಕರಸ್ಥಲದಲ್ಲಿ. ಇದ್ದಾನೆ ನೋಡಾ, ಎನ್ನ ಗುರು ಅನಿಮಿಷನು ಎನ್ನ ಜ್ಞಾನದೊಳಗೆ. ಇದ್ದಾನೆ ನೋಡಾ, ಎನ್ನ ಗುರುವಿನ ಗುರು ಪರಮಗುರು ಸಂಗನಬಸವಣ್ಣ ಎನ್ನ ಕಂಗಳ ಮುಂದೆ! ಗುಹೇಶ್ವರ ಸಾಕ್ಷಿಯಾಗಿ, ಎನ್ನ ಮೇಲೆ ದ್ರೋಹವಿಲ್ಲ ಕಾಣಾ ಚೆನ್ನಬಸವಣ್ಣಾ!