Index   ವಚನ - 1164    Search  
 
ಗುರು ಶಿಷ್ಯರಿಬ್ಬರ ಮಧ್ಯದಲ್ಲಿ ಒಂದು ಮಗು ಹುಟ್ಟಿತ್ತು ನೋಡಾ! ಗುರುವಿಂಗೆ ಗುರುವಾದ ಪರಿಯೆಂತೊ? ಶಿಷ್ಯಂಗೆ ಶಿಷ್ಯನಾದ ಪರಿಯೆಂತೊ? ಆದಿಯ ಲಿಂಗವ ಸಾಧ್ಯವ ಮಾಡಿ ತೋರಿದ ಗುಹೇಶ್ವರನ ಚೆನ್ನಬಸವಣ್ಣಂಗೆ ಶರಣೆಂದು ಬದುಕಿದೆನು ಕಾಣಾ ಸಂಗನಬಸವಣ್ಣಾ.