Index   ವಚನ - 1165    Search  
 
ಗುರುಸ್ಥಲಭಕ್ತರ ಮೂಲ ಜ್ಞಾನಶಕ್ತಿಗಳಾರು ಗುರುಸ್ವರೂಪವಾದವು. ಆ ಗುರುಸ್ವರೂಪವನುಳ್ಳ ಶಕ್ತಿಗಳಿಂದ, ಪರಮಚೈತನ್ಯವೆಂಬ ಮಂಟಪ ಉದಯಿಸಿ ಸಕಲಲೋಕಕ್ಕೆ ಆದಿಯಾಯಿತ್ತು. ಆ ಮಂಟಪದ ಮೇಲೆ ನಾನು ಕುಳಿತು ಸಂತೋಷದಿಂದ ಗುಹೇಶ್ವರಲಿಂಗವ ಕಣ್ಣು ತುಂಬಿ ನೋಡಿದ ನೋಟ, ಸಕಲಭಕ್ತರಿಗೆ ಕೂಟವಾಯಿತ್ತು ಕಾಣಾ ಸಂಗನಬಸವಣ್ಣಾ.