Index   ವಚನ - 1209    Search  
 
ತನ್ನನರಿಯೆನೆಂಬುದು ಅಜ್ಞಾನ ನೋಡಾ. ಅರಿಯದ ಅಜ್ಞಾನವ ಅತಿಗಳೆದು ಜ್ಞಾನವ ಕಾಣೆನೆಂಬುದು ವಿಪರೀತ ಭಾವ ನೋಡಾ! ಎಲ್ಲವನು ತೋರುವ ಘನವನು ಎಲ್ಲಿಯೂ ಕಾಣಬಾರದು. ಕಾಣಬಾರದ ನಿಜವ ತೋರಬಾರದು, ತೋರಬಾರದ ನಿಜವ ತಿಳಿಯಬಾರದು,. ಗುಹೇಶ್ವರಲಿಂಗದಲ್ಲಿ ಬಯಕೆಯುಳ್ಳನ್ನಕ್ಕ. ತವಕ ಎಡೆಗೊಂಡಿಪ್ಪ ಕಾರಣ ತಿಳುಹಲಿಲ್ಲವೆಂಬುದ ನಿನ್ನ ನೀ ತಿಳಿದು ನೋಡಾ ಸಿದ್ಧರಾಮಯ್ಯಾ.