ವಚನ - 1217     
 
ತನುವ ತೋಂಟವ ಮಾಡಿ, ಮನವ ಗುದ್ದಲಿ ಮಾಡಿ ಅಗೆದು ಕಳೆದೆನಯ್ಯಾ ಭ್ರಾಂತಿನ ಬೇರ. ಒಡೆದು ಸಂಸಾರದ ಹೆಂಟೆಯ, ಬಗಿದು ಬಿತ್ತಿದೆನಯ್ಯಾ ಬ್ರಹ್ಮಬೀಜವ. ಅಖಂಡಮಂಡಲವೆಂಬ ಬಾವಿ, ಪವನವೆ ರಾಟಾಳ, ಸುಷುಮ್ನನಾಳದಿಂದ ಉದಕವ ತಿದ್ದಿ. ಬಸವಗಳೈವರು ಹಸಗೆಡಿಸಿಹವೆಂದು ಸಮತೆ ಸೈರಣೆಯೆಂಬ ಬೇಲಿಯನಿಕ್ಕಿ, ಆವಾಗಳೂ ಈ ತೋಂಟದಲ್ಲಿ ಜಾಗರವಿದ್ದು ಸಸಿಯ ಸಲಹಿದೆನು ಕಾಣಾ ಗುಹೇಶ್ವರಾ.