ವಚನ - 1220     
 
ತನುವಿನಲ್ಲಿ ತನು ಸವೆಯದು, ಮನದಲ್ಲಿ ಮನ ಸವೆಯದು, ಧನದಲ್ಲಿ ಧನ ಸವೆಯದು. ಭಕ್ತಿಯುಕ್ತಿಯ ಮಾತು ನಿನಗೇಕೆ ಹೇಳಾ ಬಸವಾ? ಮಾಟಕೂಟವೆಂಬ ಕೀರ್ತಿವಾರ್ತೆಗೆ ಸಿಲುಕಿ ಜಂಗಮವೆ ಲಿಂಗವೆಂಬುದ ಮರೆದೆಯೆಲ್ಲಾ ಬಸವಣ್ಣಾ! ಗುಹೇಶ್ವರನ ಶರಣರಿಗೆ ತ್ರಿಕರಣವನೊಪ್ಪಿಸಿದಲ್ಲದೆ ಭಕ್ತನಾಗಬಾರದು ಕಾಣಾ ಸಂಗನಬಸವಣ್ಣಾ.