ವಚನ - 1226     
 
ತಪ್ಪ ಹೊರಿಸಿ ಹೊರಟೆಹೆನೆಂಬುದು ಸತ್ಯವೆ? ತನು, ಸೀರೆಯನುಳಿದು ನಿರ್ವಾಣವಾದಲ್ಲಿ ಮನದ ಭ್ರಾಂತು ನಿಶ್ಚಯವಾಗದು! ಕೇಶವೆಂಬ ಸೀರೆ ಅಂಗಕ್ಕೆ ಮರೆಯಾಯಿತ್ತು. ಅಪಮಾನವೆಂತು ಹರಿಯಿತ್ತು? ಅದು ಗುಹೇಶ್ವರಲಿಂಗಕ್ಕೆ ಸಲ್ಲದ ವೇಷ!