ವಚನ - 1228     
 
ತಮ್ಮ ತಾವರಿಯರು, ಹೇಳಿದಡೂ ಕೇಳರು. ಆರರ ಹೊಲಬ ಏನೆಂದರಿಯರು. ಎಂಟರ ಕಂಟಕವ ಮುನ್ನರಿಯರು. ಏರಿದ ಬೆಟ್ಟವ ಇಳಿಯಲರಿಯದವರ ಏನೆಂಬೆ ಗುಹೇಶ್ವರಾ?