ವಚನ - 1230     
 
ತಲೆಯಿಲ್ಲದ ಮೃಗ ಒಡಲಿಲ್ಲದೆ ಆಹಾರವ ಕೊಂಡಿತ್ತು, ಹೆಜ್ಜೆ ಇಲ್ಲದೆ ಹರಿಯಿತ್ತು! ಅದ ಶುದ್ಧಿಯ ಮಾಡ ಹೋದಾತನಿನ್ನು ಮರಳನು. ವೆಜ್ಜವಿಲ್ಲದ ಮಣಿಯ ದಾರವಿಲ್ಲದೆ ಪವಣಿಸುವ ನಿಮ್ಮ ಶರಣನ ಪರಿಯ ನೋಡಾ ಗುಹೇಶ್ವರಾ!