Index   ವಚನ - 1232    Search  
 
ತಾನಿಟ್ಟ ಬೇತಾಳ ತನ್ನನೆ ತಿಂದಿತ್ತೆಂಬಂತೆ, ನಿನ್ನ ಭವಾವಳಿಯನೆತ್ತುವನ್ನಕ್ಕ ಎನ್ನ ಮರವೆ ಎನಗೆ ಎಚ್ಚರಿಕೆಯಾಯಿತ್ತು, ಎನ್ನ ಪೂರ್ವ ನಿರ್ವಾಹವಾಯಿತ್ತು! ನಿಮ್ಮ ವರ್ಮ ತಿಳಿಯದೆನಗೆ, ಅದೆಂತೆಂದಡೆ: ಹಿಂದೆ ನೀನೇನಾಗಿದ್ದೆ ಎಂಬುದನು ಅರಿಯೆನಾಗಿ. ಇಂದು ನಿಮ್ಮ ಮನೆಯಲಿ ಆರೋಗಣೆಯಾಗದು ಕಾಣಾ ಸಂಗನಬಸವಣ್ಣ ನಮ್ಮ ಗುಹೇಶ್ವರಲಿಂಗಕ್ಕೆ!