Index   ವಚನ - 1240    Search  
 
ತಾಳು ಬೋಳು ಕಟ್ಟಿಗೆ ಕರ್ಪರವೆಂದೆಂಬರು. ತಾಳು ಬೋಳು ಕಟ್ಟಿಗೆ ಕರ್ಪರವಾವುದೆಂದರಿಯರು. ತಾಳು: ತನುಗುಣಾದಿಗಳ ಪ್ರಾಣಗುಣಾದಿಗಳ ತಾಳಿಕೊಂಡಿರಬಲ್ಲಡೆ ತಾಳು. ಬೋಳು: ಭ್ರಮೆಯಿಲ್ಲದೆ ಬಂಧನವಿಲ್ಲದೆ ಸಂಸಾರ ವಿಷಯಗಳ ಬೋಳೈಸಿ ತನ್ನಿಚ್ಛೆಗೆ ನಿಲಿಸಿಕೊಂಡಿರಬಲ್ಲಡೆ ಬೋಳು. ಕಟ್ಟಿಗೆ: ಕರಣಾದಿ ಗುಣಂಗಳ ನಿಲಿಸಿಕೊಂಡಿರಬಲ್ಲಡೆ ಕಟ್ಟಿಗೆ. ಕರ್ಪರ: ಪರವ ಅರಿದಿರಬಲ್ಲಡೆ ಕರ್ಪರ- ಇಂತೀ ಚತುರ್ವಿಧವನರಿದವರ ಪರಮಾರಾಧ್ಯರೆಂಬೆ ಕಾಣಾ ಗುಹೇಶ್ವರಾ.