ವಚನ - 1242     
 
ತಿಳಿದಿರ್ದ ಮಡುವಿನೊಳಗೆ ಸುಳಿಸುಳಿದಾಡುತ್ತಿದೆ ಒಂದು ಸುವರ್ಣದ ಬಿಂದು! ಅದು ಹಿಂದು ಮುಂದಾಗಿ ನೋಡಿದವರಿಗೆಲ್ಲದೆ ಕಾಣಬಾರದು. ಮಡುವ ತುಳುಕದೆ ದಡವ ಸೋಂಕದೆ ಹಿಡಿಯಬಲ್ಲಡೆ ಗುಹೇಶ್ವರನೆಂಬ ಲಿಂಗವು ಈಗಳೆ ಸಾಧ್ಯ.