Index   ವಚನ - 1253    Search  
 
ದೇವನೊಲಿದ, ನೀನೊಲಿದೆ-ಎಂಬುದು ಅದಾವುದಕ್ಕಾ? ಭಾವಶುದ್ಧವಾದಲ್ಲಿ ಸೀರೆಯನಳಿದು ಕೂದಲು ಮರೆಸಲೇತಕ್ಕೆ? ಅದು ಅಂತರಂಗದ ನಾಚಿಕೆ ಬಾಹ್ಯದಲ್ಲಿ ತೋರಿತ್ತು. ಅದು ನಮ್ಮ ಗುಹೇಶ್ವರಲಿಂಗಕ್ಕೆ ಒಲವರವಲ್ಲ.