ವಚನ - 1255     
 
ದೇಹಭಾವವಳಿದಲ್ಲದೆ ಜೀವಭಾವವಳಿಯದು. ಜೀವಭಾವವಳಿದಲ್ಲದೆ ಭಕ್ತಿಭಾವವಳವಡದು. ಭಕ್ತಿಭಾವವಳವಟ್ಟಲ್ಲದೆ ಅರಿವು ತಲೆದೋರದು. ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು. ಕುರುಹು ನಷ್ಟವಾದಲ್ಲದೆ ಮಾಯೆ ಹಿಂಗದು. ಇದು ಕಾರಣ, ಕಾಯದ ಜೀವದ ಹೊಲಿಗೆಯ ಅಳಿವ ಭೇದವ ತಿಳಿಯಬಲ್ಲಡೆ ಗುಹೇಶ್ವರಲಿಂಗದ ಅರಿವು ಸಾಧ್ಯವಪ್ಪುದು ಕಾಣಾ ಸಿದ್ಧರಾಮಯ್ಯಾ.