Index   ವಚನ - 1290    Search  
 
ನಿಮ್ಮ ಲೀಲೆ, ನಿಮ್ಮ ವಿನೋದ, ನಿಮ್ಮ ಹರೆ, ನಿಮ್ಮ ಕೊಳಲು, ಆನಿದಕ್ಕೆ ಬೇಕೆನ್ನೆ ಬೇಡೆನ್ನೆ. ಮೇಘವಹ್ನಿ ಧರೆಗೆರಗುತ್ತ ಭೂಲೋಕವ ಬೆಸಗೊಂಡಿತ್ತೆ? ಉದರಾಗ್ನಿ ಧರೆಗೆರಗುತ್ತ ಭೂತಂಗಳ ಬೆಸಗೊಂಡಿತ್ತೆ? ಗುಹೇಶ್ವರ ಅಲ್ಲಮನ ನಿರುಪಮ ಮಹಿಮೆ ಎಂತಿದ್ದಿತ್ತು ಆ ಹಾಂಗೆ ನೀನು ಮಾಡುವುದಲ್ಲದೆ ನಾನಿದಕ್ಕೆ ಬೇಕೆನ್ನೆನು ಬೇಡೆನ್ನೆನು.