ವಚನ - 1291     
 
ನಿಮ್ಮಲ್ಲಿ ಭಕ್ತಿಯುಂಟು, ತಮ್ಮಲ್ಲಿ ಭಕ್ತಿಯುಂಟು. ಎಮ್ಮಲ್ಲಿ ಭಕ್ತಿಯುಂಟು ಎಂದಡೆ ಶಿವಶರಣರು ಮೆಚ್ಚುವರೆ? ಹೂಸಿ ಹುಂಡನೆ ಮಾಡಿ ಬಾಯ ಸವಿಯ ನುಡಿವರೆಲ್ಲಾ ಭಕ್ತರಪ್ಪರೆ? ಮಾತಿನ ಅದ್ವೈತವ ಕಲಿತು ಮಾರುಗೋಲ ಬಿಡುವರೆಲ್ಲ ಭಕ್ತರಪ್ಪರೆ? ಬೆಳ್ಳಿಗೆಯ ಮಕ್ಕಳೆಂದಡೆ ಬಳ್ಳವಾಲ ಕರೆವವೆ ಮರುಳೆ? ಸಂಗನಬಸವಣ್ಣನೆಂದರೆ ಮಾತಿನ ಮಾತಿಂಗೆಲ್ಲ ಭಕ್ತಿಯುಂಟೆ? ಬಂದ ಜಂಗಮದ ಇಂಗಿತಾಕಾರವನರಿದು, ಇದಿರೆದ್ದು ವಂದಿಸಿ, ಕೈಮುಗಿದು ನಡುನಡುಗಿ ಕಿಂಕಿಲನಾಗಿ, ಭಯಭೀತಿ ಭೃತ್ಯಾಚಾರವಾಗಿ ಇರಬಲ್ಲಡೆ ಅದು ಭಕ್ತಿ, ಅದು ವರ್ಮ! ಬಂದವರಾರೆಂದರಿಯದೆ, ನಿಂದ ನಿಲವರಿಯದೆ ಕೆಮ್ಮನೆ ಅಹಂಕಾರವ ಹೊತ್ತುಕೊಂಡಿಪ್ಪವರ ನಮ್ಮ ಗುಹೇಶ್ವರಲಿಂಗನೊಲ್ಲ ನೋಡಾ!