ವಚನ - 1295     
 
ನಿರ್ವಿಕಲ್ಪಿತದ ಅದ್ವೈತವ ನೋಡಿರೆ! ಬೆಳಗಿನೊಳಗಣ ಬೆಳಗು ಅಡಗಿತ್ತು ನೋಡಿರೆ! ಚಂದ್ರ ಸೂರ್ಯರು ಭೂಲೋಕದೊಳು ಅಂದು ಅದಾರುವ ಕಾಣೆ! ಜ್ಯೋತಿಯಿಲ್ಲದ ಬೆಳಗಿನ ಪ್ರಭೆಯೊ, ಗುಹೇಶ್ವರಲಿಂಗದಲ್ಲಿ ಸಿದ್ಧರಾಮಯ್ಯದೇವರ ಮಹಾಘನವು!