ವಚನ - 1300     
 
ನೀರ, ಧಾರುಣಿಯೊಳಗೆ ನಾರಿ ಶೃಂಗಾರವ ಮಾಡಿ, ಈರೇಳು ಭವನವನಮಳೋಕ್ಯವ ಮಾಡಿ, ಬಿಂದು ಶಕ್ತಿಯ ಭೇದ ಸಂದ ಯೋಗದ ಸುಖವ ತಂದು ಮೂರ್ತಿಗೊಳಿಸಿದವರಾರು? ಒಂದೆರಡರ ನುಡಿಯ ಮತ್ತೊಂದು ಗ್ರಹಿಸಿತ್ತ ಕಂಡೆ. ಬಿಂದುವಿನ ರಸದ ಪರೀಕ್ಷೆಯ ಭೇದವ ಚಂದ್ರಕಾಂತದ ಗಿರಿಗೆ ಅರುಣ ಚಂದ್ರನೊಡನೆ ಇಂಬಿನಲ್ಲಿಪ್ಪ ಪರಿಯ ನೋಡಾ! ಅಂಗಯ್ಯ ತಳದೊಳು ಮೊಲೆ ಕಂಗಳಲ್ಲಿ ಕರ ಸನ್ನೆಗೆಯ್ದಿಂಬಿನಲ್ಲಿ ನೆರೆವ ಸುಖ ಅಂದಿನಾದಿಯ ಪ್ರತಿಬಿಂಬ ಇಂದೆನಗೆ ತೋರಿತ್ತು. ಗುಹೇಶ್ವರನ ಶರಣ ಚೆನ್ನಬಸವಣ್ಣಂಗೆ ಶರಣೆನುತಿರ್ದೆನು.